ಬೈಂದೂರು , ಜ.09 (DaijiworldNews/AK): ಬೈಂದೂರಿನಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರು ನಾಗೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ ಹೊಡೆದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರು ಬಳಿ ನಡೆದಿದೆ.


ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಕೇರಳ ಮೂಲದವರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಬೈಂದೂರು ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.