ಮಂಗಳೂರು, ಜ.10(DaijiworldNews/TA): ಮೆದುಳು ನಿಷ್ಕ್ರಿಯಗೊಂಡ ಶಿವಮೊಗ್ಗ ಮೂಲದ ಮಹಿಳೆಯ ಅಂಗಾಂಗಗಳ ದಾನ ಪ್ರಕ್ರಿಯೆ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಶುಕ್ರವಾರ ನಡೆಯಿತು. ಮಹಿಳೆಯ ಕಣ್ಣುಗಳನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾನ ಮಾಡಲಾಗಿದ್ದು, ಯಕೃತ್ತನ್ನು ಮೈಸೂರಿಗೆ ಜೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಸಾಗಿಸಲಾಗಿದೆ.





ಶಿವಮೊಗ್ಗ ಜಿಲ್ಲೆಯ ರಾಗಿಗುಡ್ಡೆ ನಿವಾಸಿ ರೇಖಾ (41) ಮನೆಗೆಲಸ ಮಾಡುತ್ತಿದ್ದ ವೇಳೆ ತೀವ್ರ ಅಸ್ವಸ್ಥಗೊಂಡಿದ್ದರು. ಮೊದಲಿಗೆ ಶಿವಮೊಗ್ಗದ ಆಸ್ಪತ್ರೆಗೆ ದಾಖಲಾಗಿದ್ದ ಆಕೆಯನ್ನು ಜನವರಿ 6ರಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆಕೆಯ ಬ್ರೈನ್ ಡೆಡ್ ಎಂದು ವೈದ್ಯರು ಹೇಳಿದ ನಂತರ ಅಂಗಾಂಗ ದಾನ ಮಾಡುವ ನಿರ್ಧಾರ ಮಾಡಿದರು.
ವೆನ್ಲಾಕ್ ಆಸ್ಪತ್ರೆಯ 176 ವರ್ಷಗಳ ಇತಿಹಾಸದಲ್ಲಿ ಇದು ಮೊದಲ ಅಂಗಾಂಗ ದಾನವಾಗಿದೆ. ಆಸ್ಪತ್ರೆಯ ಅಧೀಕ್ಷಕ ಡಾ.ಶಿವಪ್ರಕಾಶ್ ಅವರು, ಅಂಗಾಂಗ ಹಿಂಪಡೆಯುವ ಮೊದಲು ಮೆದುಳಿನ ಮರಣವನ್ನು ಖಚಿತಪಡಿಸಲು ಸಂಪೂರ್ಣ ಪರೀಕ್ಷೆಗಳನ್ನು ನಡೆಸಲಾಯಿತು.