ಕುಂದಾಪುರ, ಜ.13(DaijiworldNews/AK):ಭೀಕರ ಅಪಘಾತದಲ್ಲಿ ಕಾರೊಂದು ಡಿವೈಡರ್ಗೆ ಹಾರಿ ಎದುರಿನಿಂದ ಬರುತ್ತಿದ್ದ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕರಿಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಕುಂಭಾಶಿಯ ರಾಷ್ಟ್ರೀಯ ಹೆದ್ದಾರಿ 66ರ ಏಕದಂತ ಸರ್ವೀಸ್ ಸ್ಟೇಷನ್ ಬಳಿ ಜನವರಿ 12ರ ಭಾನುವಾರ ರಾತ್ರಿ ಈ ಘಟನೆ ನಡೆದಿದೆ.


ಬ್ರಹ್ಮಾವರದಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಐಸ್ಕ್ರೀಂ ಟೆಂಪೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಿಂದ ಎರಡೂ ವಾಹನಗಳಿಗೆ ಭಾರೀ ಹಾನಿಯಾಗಿದ್ದು, ಚಾಲಕರಿಬ್ಬರಿಗೂ ಗಂಭೀರ ಗಾಯಗಳಾಗಿವೆ.
ಸ್ಥಳೀಯರು ಗಾಯಾಳು ಚಾಲಕರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ ಮಧ್ಯೆ ಕುಂದಾಪುರ ಸಂಚಾರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.