ಕಾಸರಗೋಡು, ಜ.13 (DaijiworldNews/AA): ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಶಿರಿಯ ಬಳಿ ಸೋಮವಾರ ಮಧ್ಯಾಹ್ನ ಉಂಟಾದ ಅಪಘಾತದಲ್ಲಿ ಮಹಿಳೆಯೋರ್ವರು ಮೃತಪಟ್ಟು ಐವರು ಗಾಯಗೊಂಡ ಘಟನೆ ನಡೆದಿದೆ.

ಕಾಞ೦ಗಾಡ್ ಕೊವ್ವಲ್ ಪಳ್ಳಿಯ ನಫೀಸಾ (62) ಮೃತಪಟ್ಟ ಮಹಿಳೆ.
ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ದಾಖಲಾಗಿರುವ ಸಂಬಂಧಿಕರನ್ನು ಭೇಟಿ ಮಾಡಲು ಕಾರಿನಲ್ಲಿ ತೆರಳಿ ಮರಳುತ್ತಿದ್ದಾಗ ಇನ್ನೊಂದು ಕಾರು ನಡುವೆ ಅಪಘಾತ ನಡೆದಿದೆ. ಗಂಭೀರ ಗಾಯಗೊಂಡ ನಫೀಸಾರವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರೂ ಸಾವನ್ನಪ್ಪಿದ್ದಾರೆ. ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.