ಉಡುಪಿ, ಜ.14 (DaijiworldNews/AA): ವಸತಿ ಸಂಕೀರ್ಣವೊಂದರ ನಾಲ್ಕನೇ ಮಹಡಿಯಲ್ಲಿ ಖಾಸಗಿ ಬ್ಯಾಂಕ್ ಉದ್ಯೋಗಿಯೊಬ್ಬರು ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟು ಪತ್ತೆಯಾಗಿರುವ ಘಟನೆ ಉಡುಪಿಯಲ್ಲಿ ಸಂಭವಿಸಿದೆ.

ಗೋಪಾಲ ಕೃಷ್ಣ ಮೃತಪಟ್ಟ ಬ್ಯಾಂಕ್ ಉದ್ಯೋಗಿ.
ಖಾಸಗಿ ಬ್ಯಾಂಕಿನ ಉದ್ಯೋಗಿಯಾಗಿದ್ದ ಗೋಪಾಲ ಕೃಷ್ಣ ಅವರು ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ.
ಉಡುಪಿ ಟೌನ್ ಠಾಣೆಯ ಸಹಾಯಕ ಸಬ್-ಇನ್ಸ್ಪೆಕ್ಟರ್ ಜಯಕರ್ ಮತ್ತು ಅವರ ತಂಡವು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದರು.
ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರ ಸಹಾಯದಿಂದ ಮೃತದೇಹವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಯಿತು.