ಬ್ರಹ್ಮಾವರ,ಜ.16 (DaijiworldNews/AK): ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ ಬಿರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇತ್ತೀಚೆಗಷ್ಟೇ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ ಸ್ಥಾನಗಳನ್ನು ಗೆಲ್ಲುವ ಮೂಲಕ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ.
ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ ಬಿರ್ತಿ, ಉಪಾಧ್ಯಕ್ಷರಾಗಿ ಗಣೇಶ್ ಶೆಟ್ಟಿ ಹಂದಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ರಾಜೇಶ್ ಶೆಟ್ಟಿ ಅವರು ಸಕ್ರಿಯ ಬಿಜೆಪಿ ಪಕ್ಷದವರಾಗಿದ್ದಾರೆ, ಬ್ರಹ್ಮಾವರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯ ಬೆಂಬಲವನ್ನು ಹೊಂದಿದ್ದಾರೆ.
ಹೊಸದಾಗಿ ಆಯ್ಕೆಯಾದ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಜನವರಿ 16, 2025 ರಂದು ಸಂಜೆ 4:00 ಗಂಟೆಗೆ ನಡೆಯಲಿದೆ.