ಸುಳ್ಯ, ಜ.18(DaijiworldNews/TA): ಸುಳ್ಯದ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ಕುಡಿತದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಪತ್ನಿಯನ್ನು ಗುಂಡು ಹಾರಿಸಿ ಕೊಲೆ ಮಾಡಿದ್ದಲ್ಲದೆ, ನಂತರ ಆ್ಯಸಿಡ್ ಸೇವಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಕೊಲೆಯಾದವರು ರಾಮಚಂದ್ರಗೌಡರ ಪತ್ನಿ ವಿನೋದಾ ಕುಮಾರಿ ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



ರಾಮಚಂದ್ರ, ನಿತ್ಯ ಕುಡಿಯುತ್ತಿದ್ದುದರಿಂದ ಪತ್ನಿ ವಿನೋದಾ ಜೊತೆ ಜಗಳವಾಡುತ್ತಿದ್ದನೆಂದು ಹೇಳಲಾಗಿದೆ. ಶುಕ್ರವಾರ ರಾತ್ರಿ ಪತಿ-ಪತ್ನಿ ನಡುವೆ ಮತ್ತೊಮ್ಮೆ ಗಲಾಟೆ ನಡೆದಾಗ, ಮಗ ಪ್ರಶಾಂತ್ನ್ನು ಗುರಿಯಾಗಿಸಲು ರಾಮಚಂದ್ರ ಗುಂಡು ಹಾರಿಸಲು ಯತ್ನಿಸಿದ್ದಾನೆ. ತಾಯಿ ವಿನೋದಾ ಅಡ್ಡ ಬಂದಾಗ ಗುಂಡು ಅವಳಿಗೆ ತಗುಲಿ ಅಚಾತುರ್ಯ ಸಂಭವಿಸಿತ್ತು.
ನಂತರ ಪತ್ನಿಯ ಸಾವಿನಿಂದ ಮನನೊಂದು ರಾಮಚಂದ್ರ ಆ್ಯಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಕಾಯ್ದೆ 2023ರ ಕಲಂ 103 ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 25 ಮತ್ತು 27 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.