ಕಾಪು, ಜ.20 (DaijiworldNews/AA): ಉಚ್ಚಿಲ ಪೇಟೆಯಲ್ಲಿ ನಡೆಯುತ್ತಿರುವ ನಿರಂತರ ಅಪಘಾತ ಮತ್ತು ಸರಣಿ ಸಾವನ್ನು ಖಂಡಿಸಿ ಉಚ್ಚಿಲ ನಾಗರಿಕ ಹೋರಾಟ ಸಮಿತಿ ನೇತೃತ್ವದಲ್ಲಿ ಇಂದು ಉಚ್ಚಿಲ ಪೇಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.



ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ನೂರಾರು ಮಂದಿ ಪ್ರತಿಭಟನಾಕಾರರು ಪಾಲ್ಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶಪಾಲ್ ಸುವರ್ಣ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು.
ತಹಶೀಲ್ದಾರ್ ಪ್ರತಿಭಾ, ಸಿಪಿಐ ಜಯಶ್ರೀ ಮಾನೆ, ಪಿಡಿ ಆಜ್ಮ ಅವರನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ತುರ್ತಾಗಿ ಸಭೆ ಕರೆದು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಆಗ್ರಹಿಸಿದ್ದಾರೆ.
ಪ್ರತಿಭಟನಾ ಸಭೆಯಲ್ಲಿ ಬಡಾ ಗ್ರಾ. ಪಂ. ಅಧ್ಯಕ್ಷ ಶಿವಕುಮಾರ್ ಮೆಂಡನ್, ನಾಗರಿಕ ಸಮಿತಿ ಅಧ್ಯಕ್ಷ ಸಿರಾಜ್ ಉಚ್ಚಿಲ, ಪ್ರಮುಖರಾದ ಎಂ.ಎ. ಗಫೂರ್, ಶೇಖರ ಹೆಜಮಾಡಿ, ಇಬಾದುಲ್ಲಾ, ಮುಸ್ತಾಫ ಸಅದಿ, ವೇದವ್ಯಾಸ ಬಂಗೇರ, ಯು.ಸಿ. ಶೇಖಬ್ಬ, ಶೇಖರ್ ಹೆಜ್ಮಾಡಿ, ಸುಕುಮಾರ್, ಶಕುಂತಳ ಶೆಟ್ಟಿ ಮುಂತಾದವರು ಭಾಗವಹಿಸಿದ್ದರು.