ಸುಳ್ಯ, ಜ.22(DaijiworldNews/TA) : ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಸಮೀಪದ ಕಲ್ವೆರ್ಪೆಯಲ್ಲಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಬುಧವಾರ ವರದಿಯಾಗಿದೆ.








ಬೈಕ್ ಮಡಿಕೇರಿ ಕಡೆಯಿಂದ ಮಂಗಳೂರು ಕಡೆ ತೆರಳುತ್ತಿತ್ತು. ಕಾರು ಸುಳ್ಯದಿಂದ ಸಂಪಾಜೆ ಕಡೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಗಾಯಾಳು ಬೈಕ್ ಸವಾರನನ್ನು ಅಸ್ಪತ್ರೆಗೆ ಕರೆದೊಯ್ಯಲಾಗಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.