ಉಳ್ಳಾಲ,,ಜ.22(DaijiworldNews/AK): ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಇಂದು ತಮಿಳುನಾಡಿನ ತಿರುನೆಲ್ವೆಲಿ ಜಿಲ್ಲೆಯ ಅಂಬಸಮುತ್ರಮ್ ಕೋರ್ಟ್ ಗೆ ಹಾಜರುಪಡಿಸಲಾಯಿತು.ಆರೋಪಿಗಳಾದ ಮುರುಗಂಡಿ ಥೇವರ್, ಯೋಸುವಾ ರಾಜೇಂದ್ರನ್ ಅವರನ್ನು ನ್ಯಾಯಮೂರ್ತಿ ಅಚ್ಯುತನ್ ಅವರ ಎದುರು ಹಾಜರುಪಡಿಸಲಾಯಿತು.

ಅಲ್ಲದೇ ಆರೋಪಿಗಳನ್ನು ಹಾಜರುಪಡಿಸಿ ಫಿಯೇಟ್ ಕಾರು, ಎರಡು ಪಿಸ್ತೂಲು, 4 ಲೈವ್ ಬುಲೆಟ್ಸ್, ಮೂರು ಲಕ್ಷ ಹಣ, 2 ಕೆ. ಜಿ ಚಿನ್ನ ವಶಕ್ಕೆ ಪಡೆಯಲಾಗಿದೆ ಎಂದುಕೋರ್ಟ್ಗೆ ಪೊಲೀಸರು ಮಾಹಿತಿ ನೀಡಿದರು. ಕೋರ್ಟ್ಗೆ ಹಾಜರುಪಡಿಸಿದ ಬಳಿಕ ಆರೋಪಿಗಳ ಹೆಚ್ಚಿನ ತನಿಖೆಗಾಗಿ ಪೊಲೀಸರು ಮಂಗಳೂರಿಗೆ ಕರೆ ತರಲಾಗುತ್ತಿದೆ.
ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದಕ್ಕೆ ಸಂಬಂಧಿಸಿದಂತೆ ತನಿಖಾ ತಂಡವು ಜನವರಿ 20ರಂದು ಮಹತ್ವದ ಕಾರ್ಯಾಚರಣೆ ನಡೆಸಿದ ಮಂಗಳೂರು ಪೊಲೀಸರ ತಂಡ ಮೂವರು ಆರೋಪಿಗಳನ್ನು ತಮಿಳುನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿತ್ತು.
ತಿರುನಲ್ವೇಲಿ ಜಿಲ್ಲೆಯ ಪದ್ಮನೇರಿ ಗ್ರಾಮದ ಅಮ್ಮಕೋವಿಲ್ ನಿವಾಸಿ ಮುರುಗಂಡಿ ಥೇವರ್ (36), ಮುಂಬಯಿಯ ಡೊಂಬಿವಿಲಿ ಪಶ್ಚಿಮ ಗೋಪಿನಾಥ್ ಚೌಕ್ ರಾಮ್ಕಾಭಾಯಿ ನಿವಾಸಿ ಯೋಸುವಾ ರಾಜೇಂದ್ರನ್ (35) ಮತ್ತು ಮುಂಬಯಿ ಚೆಂಬೂರು ತಿಲಕ್ನಗರ ನಿವಾಸಿ ಕಣ್ಣನ್ ಮಣಿ (36) ಬಂಧಿತ ಆರೋಪಿಗಳು.