ಬಂಟ್ವಾಳ, ಜೂ 11 (Daijiworld News/SM): ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ-ಮಗಳ ಸಾವನ್ನಪ್ಪಿದ ದಾರುಣ ಘಟನೆ ಇಂದು ಸಂಜೆ ಬಂಟ್ವಾಳ ತಾಲೂಕಿನ ವಾಮದಪದವು ಬಾರೆಕಿನಾಡೆ ಎಂಬಲ್ಲಿ ನಡೆದಿದೆ.
ಇಲ್ಲಿನ ನಿವಾಸಿ ಗೋಪಾಲಕೃಷ್ಣ ಶೆಟ್ಟಿ ಹಾಗೂ ಮಗಳು 23ರ ಹರೆಯದ ದಿವ್ಯಶ್ರೀ ಮೃತ ದುರ್ದೈವಿಗಳು. ಇವರು ಮಂಗಳವಾರ ಸಂಜೆ ತಮ್ಮ ಮನೆಯ ತೋಟಕ್ಕೆ ಹುಲ್ಲು ತರಲೆಂದು ತೆರಳಿದ್ದರು. ಈ ವೇಳೆ ಹುಲ್ಲಿನ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಇದನ್ನು ಗಮನಿಸದೇ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಹಳೆ ವಿದ್ಯುತ್ ತಂತಿ ಬದಲಿಸದಿರುವುದು ಘಟನೆಗೆ ಕಾರಣ ಎಂದು ಸ್ಥಳೀಯರು ಮೆಸ್ಕಾಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.