ಕಾರ್ಕಳ, ಜ.30 (DaijiworldNews/AA): ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ದಿಲೀಪ್ ಹೆಗ್ಡೆ ತಮ್ಮ ವಕೀಲರ ಮೂಲಕ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ದಿಲೀಪ್ ಹೆಗ್ಡೆ ನ್ಯಾಯಾಲಯದ ತೀರ್ಪಿಗಾಗಿ ಕಾಯುತ್ತಿದ್ದಾರೆ. ಆಕ್ಷೇಪಣೆ ಸಲ್ಲಿಸಲು ಫೆಬ್ರವರಿ 4 ಕೊನೆಯ ದಿನಾಂಕವಾಗಿದೆ. ಅದೇ ದಿನ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಕಾಶಚಂದ್ರ ಶೆಟ್ಟಿ ಅಂದೇ ಆಕ್ಷೇಪಣೆ ಸಲ್ಲಿಸಲಿದ್ದಾರೆ.
ಬಾಲಕೃಷ್ಣ ಪೂಜಾರಿಯನ್ನು ಅವರ ಪತ್ನಿ ಪ್ರತಿಮಾ ಮತ್ತು ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅಜೆಕಾರ್ ಪೊಲೀಸರು ಇಬ್ಬರು ಆರೋಪಿಗಳನ್ನು ಅಕ್ಟೋಬರ್ 25 ರಂದು ಬಂಧಿಸಿದ್ದರು.