ಕುಂದಾಪುರ, ಫೆ.03(DaijiworldNews/AK ) :ವಕ್ವಾಡಿ ಕೋಟೇಶ್ವರದ ಗುರುಕುಲ ಪಬ್ಲಿಕ್ ಶಾಲೆಯಲ್ಲಿ 2025ರ ಜ.01 ಶನಿವಾರದಂದು ಸಾಂಪ್ರದಾಯಿಕ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗುರುಕುಲ ವಿದ್ಯಾ ಸಂಸ್ಥೆಯ ಜಂಟಿ ಕಾರ್ಯನಿರ್ವಾಹಕ ನಿರ್ದೇಶಕಿ ಅನುಪಮಾ ಎಸ್.ಶೆಟ್ಟಿ ವಹಿಸಿದ್ದರು. ನಮ್ಮ ಸನಾತನ ಧರ್ಮದ ತತ್ವಗಳನ್ನು ಮಕ್ಕಳಲ್ಲಿ ಬಿತ್ತುವ ಮೂಲಕ ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಅವರು ತಮ್ಮ ಭಾಷಣದಲ್ಲಿ ಹೇಳಿದರು.
ವಿವಿಧ ಸಾಂಸ್ಕಂತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ, ಉಳಿದ ಮಕ್ಕಳು ಇವರನ್ನು ಸ್ಪೂರ್ತಿಯಾಗಿ ತೆಗೆದುಕೊಂಡು ಗುರಿ ಮುಟ್ಟುವಂತೆ ಹಾರೈಸಿದರು. ಸಾಂಪ್ರದಾಯಿಕ ದಿನಾಚರಣೆ ನಿಮಿತ್ತ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು. ಪೋಷಕರಿಗಾಗಿ ಸಾಂಪ್ರದಾಯಿಕ ವಸ್ತುಪ್ರದರ್ಶನವನ್ನೂ ಏರ್ಪಡಿಸಲಾಗಿತ್ತು.
2024ನೇ ಸಾಲಿನ ಕಾರಂತ ಬಾಲ ಪುರಸ್ಕಾರ ಪ್ರಶಸ್ತಿಗೆ ಭಾಜನರಾದ ಸಾನಿಧ್ಯ ಅವರನ್ನು ತಂದೆ-ತಾಯಿಯರ ಮುಂದೆ ಗೌರವಪೂರ್ವಕವಾಗಿ ಸನ್ಮಾನಿಸಿದ್ದು ಕಾರ್ಯಕ್ರಮದ ವಿಶೇಷ.ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸುನೀಲ್ ಪ್ಯಾಟ್ರಿಕ್, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
ಅಧ್ಯಾಪಕಿ ಅಶ್ವಿನಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.