ಉಡುಪಿ, ಫೆ.03 (DaijiworldNews/AA): ಬಿ. ಜಯಕರ ಶೆಟ್ಟಿ ಇಂದ್ರಾಳಿ ಅವರು ಉಡುಪಿ ಜಿಲ್ಲಾ ಸಹಕಾರಿ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.


ಅಶೋಕ್ ಕುಮಾರ್ ಬಲ್ಲಾಳ್ 2025-2026 ರಿಂದ ಮುಂದಿನ 5 ವರ್ಷಗಳ ಅವಧಿಗೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಡುಪಿ ಜಿಲ್ಲಾ ಸಹಕಾರಿ ಒಕ್ಕೂಟದ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ಪರವಾಗಿ ಅವರನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ, ಉಡುಪಿ ಜಿಲ್ಲಾ ಸಹಕಾರಿ ಒಕ್ಕೂಟದ ನಿರ್ದೇಶಕರು ಮತ್ತು ಶಾಸಕ ಯಶ್ಪಾಲ್ ಎ ಸುವರ್ಣ, ನಿರ್ದೇಶಕ ಹೆಚ್ ಶೆಟ್ಟಿ, ಎನ್ ಮಂಜಯ್ಯ ಶೆಟ್ಟಿ, ಬಿ ಕರುಣಾಕರ ಶೆಟ್ಟಿ, ಪ್ರಸಾದ್ ಎಸ್ ಶೆಟ್ಟಿ, ಸುಧೀರ್ ವೈ, ಬಿ ಪ್ರದೀಪ್ ಯಡಿಯಾಳ್, ಅನಿಲ್ ಎಸ್ ಪೂಜಾರಿ, ಅಲೆವೂರು ಹರೀಶ್ ಕಿಣಿ, ಬಿ ಅರುಣ್ ಕುಮಾರ್ ಹೆಗ್ಡೆ, ಸಹಕಾರಿ ಸಂಘಗಳ ಉಪ ನಿಬಂಧಕರಾದ ಶ್ರೀಧರ್ ಪಿ ಎಸ್, ಉಡುಪಿ ಜಿಲ್ಲಾ ಸಹಕಾರಿ ಒಕ್ಕೂಟದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್ ಲಾವಣ್ಯ, ಅನುಷಾ ಕೋಟ್ಯಾನ್ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು. ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಸುಕನ್ಯಾ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಜಯಕರ ಶೆಟ್ಟಿ ಇಂದ್ರಾಳಿ ಅವರು ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿದರು.