ಉಡುಪಿ,ಫೆ.06(DaijiworldNews/AK) : ಶಿರ್ವ ಮಂಚಕಲ್ ನಿವಾಸಿ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ರಾಕೇಶ್ ಕಾಮತ್ (32) ಅವರು ಅಲ್ಪಕಾಲದ ಅಸೌಖ್ಯದಿಂದ ಫೆಬ್ರವರಿ 5 ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಖ್ಯಾತ ಉದ್ಯಮಿ ಬಾಲಕೃಷ್ಣ ಕಾಮತ್ ಅವರ ಪುತ್ರ. ರಾಕೇಶ್ ಕೆಲಸದ ನಿಮಿತ್ತ ಹೈದರಾಬಾದ್ಗೆ ತೆರಳಿದ್ದು, ಮನೆಗೆ ಮರಳಿದ ಬಳಿಕ ಅಸ್ವಸ್ಥರಾಗಿದ್ದರು.ವೈದ್ಯಕೀಯ ಚಿಕಿತ್ಸೆ ಪಡೆದು ಆರಂಭದಲ್ಲಿ ಚೇತರಿಸಿಕೊಂಡರೂ ಮತ್ತೆ ಆರೋಗ್ಯ ಹದಗೆಟ್ಟಿದ್ದು, ಕುಸಿದು ಬಿದ್ದಿದ್ದಾರೆ. ಪತ್ನಿ ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ರಾಕೇಶ್ ಅವರು ಪತ್ನಿ ಸಿಎ ಶ್ರುತಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.