ಡಿ 3 : ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಪರ ಪ್ರಚಾರ ಭಾಷಣ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಭರುಚ್ ನಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಡಿ 3 ಭಾನುವಾರ ಮಾತನಾಡಿದರು. ಈ ವೇಳೆ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ಬುಲೆಟ್ ರೈಲು ಯೋಜನೆ ವಿರೋಧಿಸುವವರು ಎತ್ತಿನ ಗಾಡಿಯಲ್ಲಿ ಪ್ರಯಾಣಿಸಲಿ ಎಂದು ಟೀಕೆಗಳಿಗೆ ಪ್ರತ್ಯುತ್ತರ ನೀಡಿದರು. ಕಾಂಗ್ರೆಸ್ ಸರ್ಕಾರವೂ ಈ ಹಿಂದೆ ಬುಲೆಟ್ ರೈಲು ಯೋಜನೆ ತರಲು ಬಯಸಿತ್ತು. ಆದರೆ ಅದನ್ನು ಪಡೆಯುವಲ್ಲಿ ವಿಫಲವಾಗಿದ್ದ ಕಾಂಗ್ರೆಸ್ ಇಂದು ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಕಿಡಿಕಾರಿದರು. ಜಪಾನ್ ಸಹಯೋಗದಲ್ಲಿ ಮುಂಬೈ–ಅಹಮದಾಬಾದ್ ಬುಲೆಟ್ ರೈಲು ಕಾಮಗಾರಿಕೆ ಚಾಲನೆ ನೀಡಲಾಗಿದ್ದು, ಇದರಿಂದ ಸಾವಿರಾರು ಜನಕ್ಕೆ ಉದ್ಯೋಗ ಸಿಗಲಿದೆ ಎಂದರು.