ಮಂಗಳೂರು, ಫೆ.09 (DaijiworldNews/AA): ಸುಳ್ಯ ಬಳಿ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಿದ್ದ ಕಂಕನಾಡಿ ಪೊಲೀಸ್ ಸ್ಟೇಷನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹರೀಶ್ ಅವರು ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾರೆ.

ಹರೀಶ್ ಅವರು ಮೈಸೂರು ಜಿಲ್ಲೆಯ ಕೆಆರ್ ನಗರ ತಾಲೂಕು ಗಾಯನ ಹಳ್ಳಿ ಗ್ರಾಮದ ನಿವಾಸಿಯಾಗಿದ್ದಾರೆ.
ಬುಧವಾರ ಸುಳ್ಯ ಬಳಿ ರಸ್ತೆ ಅಪಘಾತದಲ್ಲಿ ಗಾಯಗೊಂಡು ಜೀವನ್ಮರಣ ಹೋರಾಟ ನಡೆಸಿ ಇಂದು ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.