ಬಂಟ್ವಾಳ, ಫೆ.11 (DaijiworldNews/AA): ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲ್ ಜಂಕ್ಷನ್ ನ ಬಳಿ 3-4 ಮನೆಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ.





ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸ್ಥಳೀಯರ ಸಹಕಾರದೊಂದಿಗೆ ಬೆಂಕಿ ನಂದಿಸಿದರು.
ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ ಉಳಿಪ್ಪಾಡಿ ಅವರು ರಾತ್ರಿ 1:00 ಗಂಟೆಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಗ್ನಿಶಾಮಕ ದಳದ ಕಾರ್ಯಾಚರಣೆ ವೀಕ್ಷಣೆ ಮಾಡಿದರು. ಜೊತೆಗೆ ಮನೆಮಂದಿಗೆ ಸಾಂತ್ವನ ಹೇಳಿದರು. ಕಂದಾಯ ನಿರೀಕ್ಷಕ ವಿಜಯ್ ಆರ್ ಸಹಿತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.