ಮಂಗಳೂರು, ಫೆ.14 (DaijiworldNews/AK):ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಫೆಬ್ರವರಿ 15 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.

ಶನಿವಾರ ಮಧ್ಯಾಹ್ನ 2 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ಆಗಮನ, 3 ಗಂಟೆಗೆ ಮಂಗಳಾದೇವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ಮತ್ತು ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಲ್ಲಿ ಕೈಗೊಳ್ಳಲಾದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ, ಪಶು ವೈದ್ಯಕೀಯ ಆಸ್ಪತ್ರೆ ಕಟ್ಟಡ, ಕಾರ್ಫೋರೇಷನ್ ಕ್ವಾಟರ್ಸ್ ಮತ್ತು ಬಸ್ಬೇಗಳ ಹಾಗೂ ಇನ್ನಿತರೆ ಕಾಮಗಾರಿಗಳ ಉದ್ಘಾಟನೆ ಮಾಡಲಿದ್ದಾರೆ.
ಸಂಜೆ 4 ಗಂಟೆಗೆ ವಾಮಂಜೂರು ತಿರುವೈಲುಗುತ್ತು ಶಂಕು ಪೂಂಜ ದೇವು ಪೂಂಜ ಜೋಡು ಕರೆ ಕಂಬಳ ಟ್ರಸ್ಟ್ ಆಯೋಜನೆಯ ತುಳುನಾಡಿನ ಕಂಬಳ ತಿರುವೈಲೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ 6:40 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಲಿದ್ದಾರೆ.