ಮಂಗಳೂರು, ಜೂ 13(Daijiworld News/MSP): ಗೋವಾ – ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ತೊಕ್ಕೊಟ್ಟು ಫ್ಲೈಓವರ್ (ಮೇಲ್ಸೇತುವೆ)ಯು ಲೋಕಾರ್ಪಣೆಗೊಂಡಿದೆ. ಜೂ.13 ರ ಗುರುವಾರ ಬೆಳಿಗ್ಗೆ 9.00 ಗಂಟೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಮೇಲ್ಸೇತುವೆಯನ್ನು ಉದ್ಘಾಟನೆಗೊಳಿಸಿ ವಾಹನಸಂಚಾರಕ್ಕೆ ಮುಕ್ತಗೊಳಿಸಿದರು.
ಕಳೆದ ಎಂಟು ವರ್ಷಗಳಿಂದ ಕುಂಟುತ್ತಾ ಸಾಗಿದ್ದ ಫ್ಲೈಓವರ್ ಕಾಮಗಾರಿಯಿಂದ ಈ ಭಾಗದಲ್ಲಿ ವಾಹನ ಸಂಚಾರ ದುಸ್ತರವಾಗಿತ್ತು. ಅಲ್ಲದೇ ಸುತ್ತಮುತ್ತಲಿನ ಸ್ಥಳೀಯ ನಿವಾಸಿಗಳಿಗಂತೂ ಸಾಕಷ್ಟು ತೊಂದರೆಯಾಗುತ್ತಿತ್ತು. ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ಆರ್ಥಿಕ ಅಡಚಣೆಯಿಂದ ಅಮೆಗತಿಯಲ್ಲಿ ಸಾಗುತ್ತಿರುವ ವಿರುದ್ದ ವ್ಯಾಪಕ ಜನಕ್ರೋಶ ವ್ಯಕ್ತವಾಗಿತ್ತು. ಕೊನೆಗೆ ಸಂಸದರ ಶಿಫಾರಸ್ಸಿನ ಮೇರೆಗೆ ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ನಡೆಸುವ ಸಂಸ್ಥೆಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಿದ್ದರು.
ಇದೀಗ ಕೊನೆಗೂ ತೊಕ್ಕೊಟ್ಟು ಮೇಲ್ಸೇತುವೆ ಜನರ ಬಳಕೆಗೆ ಲಭ್ಯವಾಗಿದೆ.