ಸುಳ್ಯ, ಫೆ.17 (DaijiworldNews/AA): ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಬಹು ಬೇಡಿಕೆಯ ಸುಳ್ಯದ ಅರಂತೋಡು ಎಲಿಮಲೆ ರಸ್ತೆಯನ್ನು ವೀಕ್ಷಿಸಿ, ಪರಿಶೀಲಿಸಿದರು.


ಆರಂತೋಡಿನಿಂದ ಮರ್ಕಂಜದ ಸನಿಹವರೆಗೆ ಸುಮಾರು 8 ಕಿ. ಮೀ ರಸ್ತೆಯನ್ನು ಸಚಿವರು ವೀಕ್ಷಿಸಿದರು. ಈ ವೇಳೆ ಶೀಘ್ರದಲ್ಲಿ ರಸ್ತೆಯನ್ನು ಸಂಪೂರ್ಣ ಅಗಲೀಕರಣಗೊಳಿಸಲು ಅನುದಾನ ನೀಡುವುದಾಗಿ ಅವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಕೇಶವ ಅಡ್ತಲೆ, ಕಾಂಗ್ರೆಸ್ ಮುಖಂಡ ಟಿ. ಎಂ. ಶಾಹಿದ್ ಆರಂತೋಡು, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳು ಉಪಸ್ಥಿತರಿದ್ದರು.