ಉಡುಪಿ, ಫೆ.18 (DaijiworldNews/AA): ದ್ವಿಚಕ್ರವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನೋರ್ವ ಮೃತಪಟ್ಟ ಘಟನೆ ಅಜ್ಜರಕಾಡು ಅಗ್ನಿಶಾಮಕ ಠಾಣೆ ಬಳಿ ಸೋಮವಾರ ರಾತ್ರಿ ನಡೆದಿದೆ.




ಮೃತಪಟ್ಟ ಸವಾರರನ್ನು ಸ್ಥಳೀಯ ನಿವಾಸಿ ಸ್ಯಾಮುಯೆಲ್ ಸದಾನಂದ ಕರ್ಕಾಡ (59) ಎಂದು ಗುರುತಿಸಲಾಗಿದೆ.
ವೇಗವಾಗಿ ಬಂದ ಎರಡು ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದು ಸದಾನಂದ ರಸ್ತೆಗೆ ಬಿದ್ದಿದ್ದಾರೆ. ಪರಿಣಾಮ ಅವರಿಗೆ ತೀವ್ರ ಗಾಯಗಳಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.
ಅಪಘಾತದಲ್ಲಿ ಎರಡೂ ವಾಹನಗಳು ಸಂಪೂರ್ಣ ಜಖಂಗೊಂಡಿವೆ. ಈ ಕುರಿತು ಉಡುಪಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.