ಬೆಂಗಳೂರು, ಸೆ.11: ರಾಜಧಾನಿ ಬೆಂಗಳೂರಿನಲ್ಲಿ ಮಳೆರಾಯ ಪ್ರತಾಪ ತೋರಿದ್ದು, ಸಾಕಷ್ಟು ಹಾನಿ ಸಂಭವಿಸಿದೆ. ಎಡೆಬಿಡದೆ ಮಳೆ ಸುರಿದ ಪರಿಣಾಮ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆ ಕೇಂದ್ರ ಸಚಿವ ಅನಂತ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸರ್ಕಾರದ ವೈಫಲ್ಯಗಳ ಕುರಿತು ಆರೋಪ ಮಾಡಿದ್ದಾರೆ.
ಕೇಂದ್ರ ಸಚಿವ ಅನಂತ್ ಆರೋಪಕ್ಕೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವುದೇ ಕೆಲಸ ಮಾಡಿಲ್ಲ. ಆದ್ರೆ ಈಗ ಕಾಂಗ್ರೆಸ್ ಸರಕಾರದ ಮೇಲೆ ಆರೋಪ ನಡೆಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಮಳೆ ಅನಾಹುತ ಹಿನ್ನೆಲೆ ಕೇಂದ್ರ ಸಚಿವ ಅನಂತ್ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಬಿಜೆಪಿಯವರು ರಾಜ್ಯದಲ್ಲಿ 5 ವರ್ಷಗಳ ಕಾಲ ಆಡಳಿತ ನಡೆಸಿದ್ದಾರೆ. ಮಳೆ ನೀರು ಹರಿದು ಹೋಗಲು ಯಾವ ಮಾರ್ಗೋಪಾಯ ಕಂಡುಕೊಂಡಿದ್ದರು ಎಂದು ಪ್ರಶ್ನಿಸಿದ್ದಾರೆ. ಮಾತ್ರವಲ್ಲದೇ ಕೇಂದ್ರ ಸಚಿವ ಅನಂತ್ ಅವರ ಆರೋಪ ಸಮಂಜಸವಲ್ಲ ಎಂದು ಹೇಳಿದ್ದಾರೆ.