ಉಡುಪಿ, ಫೆ.20 (DaijiworldNews/AK): ಬೈಲಕೆರೆಯಲ್ಲಿ ಫೆ.19ರಂದು 32 ವರ್ಷದ ವ್ಯಕ್ತಿಯೊಬ್ಬರು ಚಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತರನ್ನು ಬೈಲಕೆರೆಯ ರಾಮಕೃಷ್ಣ ದೇವಾಡಿಗ ಅವರ ಪುತ್ರ ಸಂಗೀತ ಕಲಾವಿದ ಅಶ್ವಥ್ (32) ಎಂದು ಗುರುತಿಸಲಾಗಿದೆ.

ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.ವಿಷಯ ತಿಳಿದ ಸಮಾಜಸೇವಕ ನಿತ್ಯಾನಂದ ವೊಲಕಾಡ್ ವ್ಯಕ್ತಿಯನ್ನು ನೇಣಿನಿಂದ ಕೆಳಗಿಳಿಸಿ ಸುನೀಲ್ ಬೈಲಕೆರೆ ಅವರ ನೆರವಿನಲ್ಲಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಕರೆದೊಯ್ದರು. ಪರೀಕ್ಷೆ ಬಳಿಕ ವೈದ್ಯರು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.
ಎಎಸ್ಐ ಸುಭಾಸ್ ಕಾಮತ್, ಹೆಡ್ ಕಾನ್ಸ್ಟೆಬಲ್ ಹರೀಶ್ ಮಾಲಾ, ಟೌನ್ ಪೊಲೀಸ್ ಠಾಣೆಯ ಜಯಕರ್ ಕಾನೂನು ಕ್ರಮಕೈಗೊಂಡರು.ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.