ಕಾಸರಗೋಡು, ಫೆ.21 (DaijiworldNews/AK): ತೋಟದ ಕೆರೆಯಲ್ಲಿ ತಾಯಿ ಮತ್ತು ಎರಡು ವರ್ಷದ ಮಗು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶುಕ್ರವಾರ ಸಂಜೆ ಪೆರ್ಲ ಉಕ್ಕಿನಡ್ಕ ಸಮೀಪದ ಏಳ್ಕಾನದಲ್ಲಿ ನಡೆದಿದೆ.

ಉಕ್ಕಿನಡ್ಕ ಬಳಿಯ ಏಳ್ಕಾನ ದಟ್ಟಿಗೆಮೂಲೆಯ ಈಶ್ವರ ನಾಯ್ಕರವಾರ ಪತ್ನಿ ಪರಮೇಶ್ವರಿ (42), ಪುತ್ರಿ ಪದ್ಮಿನಿ (2)ಮೃತಪಟ್ಟವರು. ಪತಿ ಈಶ್ವರ ನಾಯ್ಕ ಹಾಗೂ ಪುತ್ರ ಕಾರ್ಯಕ್ರಮವೊಂದಕ್ಕೆ ಹೋಗಿದ್ದರು. ಸಂಜೆ ಅವರು ಹಿಂತಿರುಗಿದಾಗ ಮನೆಯಿಂದ ಇಬ್ಬರು ನಾಪತ್ತೆಯಾಗಿದ್ದರು.
ಹುಡುಕಾಡಿದಾಗ ಕಂಗಿನ ತೋಟದ ಕೆರೆಯಲ್ಲಿ ಇಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಪರಿಸರವಾಸಿಗಳು ತಲುಪಿ ಇಬ್ಬರನ್ನು ಮೇಲಕ್ಕೆತ್ತಿ ಕಾಸರಗೋಡು ಆಸ್ಪತ್ರೆಗೆ ತಲುಪಿಸಿದರೂ ಆ ವೇಳೆ ಇಬ್ಬರೂ ಮೃತಪಟ್ಟಿದ್ದರು.ಮೃತದೇಹ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ