ಕಾರ್ಕಳ, ಫೆ.28 (DaijiworldNews/AA): ನಾನಾ ಕಾರಣಗಳಿಂದಾಗಿ ಪಕ್ಷದ ಚಟುವಟಿಕೆಗಳಲ್ಲಿ ದೂರ ಸರಿದಿದ್ದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಸಕ್ರಿಯಾರಾಗುವಂತೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ನೀಡಿದ್ದಾರೆ.


ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಾರ್ಚ್ 2 ರವಿವಾರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷ ಹಾಗೂ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾರ್ಕಳದಲ್ಲಿ ಆಯೋಜಿಸಿದಲಾಗಿರುವ ಕುಟುಂಭೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಮಧ್ಯಾಹ್ನ 2.30ಕ್ಕೆ ನಗರದ ಗಾಂಧಿಮೈದಾನದಲ್ಲಿ ಆಯೋಜಿಸಲಾಗುವ ಕಾರ್ಯಕ್ರಮದಲ್ಲಿ ಕಾರ್ಕಳ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ನೂತನ ಘಟಕಗಳ ಉದ್ಘಾಟನೆ ನೆರವೇರಿಸಲಿದ್ದಾರೆ.
ಅದೇ ಸಂದರ್ಭದಲ್ಲಿ ಮಾಜಿಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿ ಅವರನ್ನು ಸನ್ಮಾನಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಅವಿಭಜಿತ ಜಿಲ್ಲೆಯಿಂದ ಸುಮಾರು 15,000 ಮಂದಿ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿಯನ್ನು ನೀಡಿದರು.
ಪಕ್ಷದ ನೇತಾರ ಮುನಿಯಾಲು ಉದಯಕುಮಾರ್ ಶೆಟ್ಟಿ ನೇತೃತ್ವದಲ್ಲಿ ಈ ಕಾರ್ಯಕ್ರಮ ಜರಗಲಿದ್ದು, ಮುಂಬರುವ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆ ಸನ್ನಿದ್ಧವಾಗಿದ್ದು, ಕಾರ್ಯಕರ್ತರನ್ನು ಹುರಿದುಂಬಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಗ್ಯಾರೆಂಟಿ ಯೋಜನೆಯ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ, ಮಹಿಳಾ ಘಟಕದ ಅಧ್ಯಕ್ಷೆ ಭಾನು ಪ್ರಕಾಶ್, ಮುಖಂಡರಾದ ಉಮೇಶ್ ರಾವ್, ಉದಯ ಶೆಟ್ಟಿ, ಅನಿಲ್ ಪೂಜಾರಿ ನೆಲ್ಲಿಗುಡ್ಡೆ, ಪ್ರವೀಣ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.