ಕಾಪು ,ಫೆ.28 (DaijiworldNews/AK): ಕಾಪು ಮಾರಿಗುಡಿ ದೇವಸ್ಥಾನದಲ್ಲಿ ನಡೆಯುತ್ತಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ವೀಕ್ಷಿಸಲು ಬಹುಭಾಷಾ ನಟಿ ಶಿಲ್ಪಾ ಶೆಟ್ಟಿ ಆಗಮಿಸಿ ಮಾರಿಗುಡಿಯ ನಿರ್ಮಾಣ, ಮರದ ಕೆತ್ತನೆ, ಚಿನ್ನದ ಗದ್ದಿಗೆ ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.


ತಂಗಿ ಶಮಿತಾ, ತಾಯಿ, ಕುಟುಂಬದ ಜೊತೆ ಬಂದು ದೇವಳದ ದರ್ಶನ ಮಾಡಿ ದೇವರ ಪ್ರಸಾದ ಸ್ವೀಕರಿಸಿದರು. ದೇವಾಸ್ಥಾನ ವೈಶಿಷ್ಟ್ಯದ ಬಗ್ಗೆ ಆದಳಿತ ಮಂಡಳಿ ವಿವರಿಸಿದರು. ನಟಿ ಶಿಲ್ಪಾ ಶೆಟ್ಟಿಗೆ ದೇಗುಲದ ಆಡಳಿತ ಮಂಡಳಿ, ವ್ಯವಸ್ಥಾಪನ ಮಂಡಳಿಯಿಂದ ಗೌರವ ಸನ್ಮಾನ ಮಾಡಲಾಯಿತು.
ಉಡುಪಿ ಜಿಲ್ಲೆ ಕಾಪು ತಾಲೂಕಿನ ಹೊಸ ಮಾರಿಗುಡಿಯಲ್ಲಿ ಹತ್ತು ದಿನಗಳ ಕಾಲ ನಡೆಯುತ್ತಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ. ಶಿಲ್ಪಾ ಶೆಟ್ಟಿ ತಂಗಿ ಶಮಿತಾ, ತಾಯಿ, ಕುಟುಂಬದ ಜೊತೆ ಬಂದು ದೇವರ ದರ್ಶನ- ಪ್ರಸಾದ ಸ್ವೀಕಾರ ಮಾಡಿ ಮಾರಿಗುಡಿಯ ನಿರ್ಮಾಣ, ಮರದ ಕೆತ್ತನೆ, ಚಿನ್ನದ ಗದ್ದಿಗೆ ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.