ಬಂಟ್ವಾಳ, ಮಾ.02 (DaijiworldNews/AA): ಐದಾರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಫರಂಗಿಪೇಟೆ ಸಮೀಪದ ಕಿದೆಬೆಟ್ಟಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣದ ತನಿಖೆಯನ್ನ ವಿವಿಧ ಆಯಾಮಗಳಲ್ಲಿ ಮಾಡಲಾಗುತ್ತಿದೆ. ಆದರೆ ಶನಿವಾರದವರೆಗೆ ಯಾವುದೇ ಮಹತ್ವದ ಮಾಹಿತಿ ದೊರೆತಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ ದಿಗಂತ್ ನಾಪತ್ತೆಯಾಗಿರುವುದು ನಿಗೂಢವಾಗಿಯೇ ಉಳಿದಿದೆ. ಆತ ಎಲ್ಲಿದ್ದಾನೆ ಬಗ್ಗೆ ಯಾವುದೇ ಸುಳಿವು ಲಭ್ಯವಾಗಿಲ್ಲ. ಆತ ಎಲ್ಲಿಗೆ ಹೋಗಿರಬಹುದು ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಲೇ ಇದೆ.
ಪ್ರಕರಣವನ್ನು ಭೇದಿಸುವಂತೆ ಪೊಲೀಸ್ ಇಲಾಖೆಯ ಮೇಲೆ ಒತ್ತಡ ಹೆಚ್ಚುತ್ತಿದ್ದು, ಹೀಗಾಗಿ ನಾಪತ್ತೆ ಪ್ರಕರಣವನ್ನು ಭೇದಿಸಲು ಗರಿಷ್ಠ ಪ್ರಯತ್ನ ಮಾಡಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಭರವಸೆ ನೀಡಿದ್ದಾರೆ.