ಕಾರ್ಕಳ, ಮಾ.04(DaijiworldNews/AK): ಪ್ರಿಯಕರನ ಜತೆ ಸೇರಿ ಪತಿಯ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತಳಾಗಿರುವ ಅಜೆಕಾರು ದೆಪ್ಪುತ್ತೆ ನಿವಾಸಿ ಪ್ರತಿಮಾ ಅವರ ಪರ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆಯನ್ನು ಕಾರ್ಕಳ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಸಂಚಾರಿ ಪೀಠ ವು ಮಾ.10ಕ್ಕೆ ಮುಂದೂಡಿದ್ದರೆ.

ಎರಡನೇ ಆರೋಪಿ ದಿಲೀಪ್ ಹೆಗ್ಡೆ ಪರ ಸಲ್ಲಿಸಿದ ಜಾಮೀನು ಅರ್ಜಿ ತಿರಸ್ಕೃತಗೊಳಿಸಿದೆ.ಮಂಗಳವಾರ ಪ್ರತಿಮಾ ಅವರ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕರು ಆಕ್ಷೇಪಣಾ ಸಲ್ಲಿಸಲು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ. ಆರೋಪಿಗಳಿಬ್ಬರನ್ನು ವಿಡಿಯೋ ಕಾನ್ಪರೆನ್ಸ್ ಮೂಲಕ ಹಾಜರುಪಡಿಸಲಾಗಿತ್ತು
ಏನಿದು ಪ್ರಕರಣ ?
2024ರ ಅ.20ರಂದು ಕಾರ್ಕಳ ತಾಲೂಕು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆ ನಿವಾಸಿ ಬಾಲಕೃಷ್ಣ ಪೂಜಾರಿ(42) ಎಂಬವರನ್ನು ಆತನ ಪತ್ನಿ ಪ್ರತಿಮ ತನ್ನ ಪ್ರಿಯಕರ ದಿಲೀಪ್ ಹೆಗ್ಡೆಯ ಜತೆ ಸೇರಿಕೊಂಡು ಹತ್ಯೆಗೈದಿದ್ದಳು. ಪೊಲೀಸ್ ತನಿಖೆಯಿಂದ ಪ್ರಕರಣ ಬಯಲಿಗೆ ಬಂದಿದ್ದು, ಆರೋಪಿಗಳಿಬ್ಬರನ್ನು ಬಂಧಿಸಲಾಗಿತ್ತು.