ಬಂಟ್ವಾಳ,ಮಾ.06(DaijiworldNews/AK): ವಿದ್ಯಾರ್ಥಿ ನಿಗೂಢ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿ 10 ದಿನವಾದರೂ ವಿದ್ಯಾರ್ಥಿಯ ಸುಳಿವು ಸಿಕ್ಕಿಲ್ಲ. ಹೀಗಾಗಿ ವಿದ್ಯಾರ್ಥಿ ದಿಗಂತ್ ಪೋಷಕರು ಹೈಕೋರ್ಟ್ ಮೊರೆ ಹೋಗಿದ್ದರು.

ಮಗನನ್ನು ಪತ್ತೆ ಮಾಡಿಕೊಡಲು ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ ದಿಗಂತ್ ತಂದೆ ಪದ್ಮನಾಭ್ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಜಸ್ಟೀಸ್ ವಿ.ಕಾಮೇಶ್ವರ್ ರಾವ್, ಜಸ್ಟೀಸ್ ಟಿ.ಎಂ ನಡಾಫ್ರಿಂದ ಹೈಕೋರ್ಟ್ ದ್ವಿಸದಸ್ಯ ವಿಭಾಗೀಯ ಪೀಠದಲ್ಲಿ ಅರ್ಜಿಯ ವಿಚಾರಣೆ ಮಾಡಲಾಗಿದ್ದು, ಮಾರ್ಚ್ 12 ರ ಒಳಗೆ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಪೊಲೀಸರಿಗೆ ಆದೇಶಿಸಲಾಗಿದೆ. ಮಾರ್ಚ್ 13ಕ್ಕೆ ವಿಚಾರಣೆ ಮುಂದೂಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ ದಿಗಂತ್, ಫೆ.25ರ ಸಂಜೆಯಿಂದ ನಾಪತ್ತೆಯಾಗಿದ್ದ. ಫರಂಗಿಪೇಟೆ ಆಂಜನೇಯ ವ್ಯಾಯಾಮ ಶಾಲೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ದಿಗಂತ್, ದೇವಸ್ಥಾನಕ್ಕೂ ಹೋಗದೆ ಮನೆಗೂ ಬಾರದೆ ನಾಪತ್ತೆಯಾಗಿದ್ದ.