ಪುತ್ತೂರು, ಮಾ.07(DaijiworldNews/TA): 16 ನೇ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಶಿಕ್ಷಣ ಹಾಗೂ ವೈದ್ಯಕೀಯ ಕ್ಷೇತ್ರಕ್ಕೆ ಅನೇಕ ಕೊಡುಗೆಯನ್ನು ನೀಡಿದ್ದಾರೆ.

ಕರಾವಳಿಗೂ ಅನುದಾನದ ಬಗ್ಗೆ ಉಲ್ಲೇಖವಾಗಿರುವ ಬಜೆಟ್ ನಲ್ಲಿ ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪನೆ ಹಾಗೂ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಕ್ರಮವಹಿಸಲಾಗುವುದು ಎಂಬುವುದಾಗಿ ಘೋಷಣೆ ಮಾಡಲಾಗಿದೆ.
ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮವಹಿಸಲಾಗುವುದು ಎಂದು ಹೇಳಲಾಗಿದೆ. ಹೀಗೆ ಚಿತ್ರದುರ್ಗ ಜಿಲ್ಲೆಯ, ಮೈಸೂರು ಜಿಲ್ಲೆಯ ತಗಡೂರು ಸಮುದಾಯ ಆರೋಗ್ಯ ಕೇಂದ್ರಕ್ಕೂ ಅನುದಾನದ ಬಗ್ಗೆ ಉ ಲ್ಲೇಖ ಮಾಡಲಾಗಿದೆ.