ಮಂಗಳೂರು, ಮಾ.07 (DaijiworldNews/AK) : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಬಜೆಟ್ ನಲ್ಲಿ ಕರಾವಳಿಗೆ ಭಾಗಗಕ್ಕೂ ಹಲವು ಕೊಡುಗೆಗಳನ್ನು ಘೋಷಿಸಿದ್ದಾರೆ. ಬಜೆಟ್ ಕೊಡುಗೆಯ ವಿವರ ಇಲ್ಲಿದೆ.

* ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪನೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಕ್ರಮ.ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ನವೀಕರಣ.
* ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ 'ಮಲ್ಟಿ-ಲೆವೆಲ್ ಪಾರ್ಕಿಂಗ್' ವ್ಯವಸ್ಥೆ ನಿರ್ಮಾಣ.
*ಮಂಗಳೂರಿನಲ್ಲಿರುವ ಮೀನುಗಾರಿಕೆ ಕಾಲೇಜಿಗೆ ಪ್ರಸಕ್ತ ನಿಗದಿಪಡಿಸಿರುವ ವಿದ್ಯಾರ್ಥಿಗಳ ಸಂಖ್ಯಾಬಲ ದ್ವಿಗುಣ
*ಉಳ್ಳಾಲದಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರಿಗಾಗಿ ವಸತಿ ಸಹಿತ ಪಿಯು ಕಾಲೇಜು ಸ್ಥಾಪನೆ.
*ಆಳ ಸಮುದ್ರ ಮೀನುಗಾರಿಕೆಯನ್ನು ಪ್ರೋತ್ಸಾಹಿಸಲು ಪ್ರಸಕ್ತ ಇರುವ ಮೀನುಗಾರಿಕೆ ದೋಣಿಗಳ ಉದ್ದದ ಮಿತಿ ಸಡಿಲಿಕೆ
*ಕರಾವಳಿ ಜಿಲ್ಲೆಗಳಲ್ಲಿನ ಮೀನುಗಾರಿಕೆ ಕೊಂಡಿ ರಸ್ತೆಗಳನ್ನು ನಬಾರ್ಡ್ ಸಹಯೋಗದಲ್ಲಿ ಅಭಿವೃದ್ಧಿಗೆ 30 ಕೋಟಿ ರೂ.
*ಪರಿಶಿಷ್ಟ ಜಾತಿ / ಪಂಗಡದ ಆಯ್ದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ರೂ. ಆರ್ಥಿಕ ನೆರವು.
*ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಕಾಲಾವಧಿ ಮೀರಿರುವ ಹಳೆಯ ಇಂಜಿನ್ ಗಳನ್ನು ಬದಲಾಯಿಸಿ, ಹೊಸ ಇಂಜಿನ್ ಖರೀದಿಸಲು ಶೇ.50ರಷ್ಟು ಒಂದು ಲಕ್ಷ ರೂ. ಮಿತಿಗೊಳಪಟ್ಟು ಸಹಾಯಧನ.
*ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ 'ಮಲ್ಟಿ-ಲೆವೆಲ್ ಪಾರ್ಕಿಂಗ್' ವ್ಯವಸ್ಥೆ ನಿರ್ಮಾಣ.
*ಪಿಲಿಕುಳದಲ್ಲಿ ಭಾರತ್ ಸೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಯುವಕರ ತರಬೇತಿ ಕೇಂದ್ರದ ಅಭಿವೃದ್ಧಿಗಾಗಿ ಎರಡು ಕೋಟಿ ರೂ.
*ಬೆಂಗಳೂರು, ಕಲಬುರಗಿ, ಮಂಗಳೂರು, ಮತ್ತು ಬೆಳಗಾವಿ ಕೆಜಿಟಿಟಿಐ ಕೇಂದ್ರಗಳಲ್ಲಿ 10 ಕೋಟಿ ರೂ. ವೆಚ್ಚದಲ್ಲಿ “Industry-4.0' ಗೆ ಅನುಗುಣವಾಗಿ ಹೊಸ ತಂತ್ರಜ್ಞಾನ ಆಧಾರಿತ ಪಠ್ಯಕ್ರಮದೊಂದಿಗೆ ಹೊಸ ಪ್ರಯೋಗಾಲಯ ಸ್ಥಾಪನೆ.
*ಬಯಲುಸೀಮೆ, ಮಲೆನಾಡು ಹಾಗೂ ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಗಳಿಗೆ ಒಟ್ಟಾರೆಯಾಗಿ 83 ಕೋಟಿ ರೂ. ಅನುದಾನ.
*ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ರಾಮನಗರ ಮತ್ತು ಉಳ್ಳಾಲಕ್ಕೆ 705 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರು ಯೋಜನೆ ಅನುಷ್ಠಾನ.
*ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಕ್ರೂಸ್, ವಾಟರ್ ಮೆಟ್ರೋ, ಕೋಸ್ಟಲ್ ಬರ್ತ್, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಕಿ ಬಂದರು, ಹೊನ್ನಾವರದಲ್ಲಿ ಹಡಗು ನಿರ್ಮಾಣ ಕ್ಷೇತ್ರ ಹಾಗೂ ನದಿ ಕ್ರೂಸ್ ಪ್ರವಾಸೋದ್ಯಮ ಯೋಜನೆಗಳಿಗೆ ವಿಸ್ತೃತ ಯೋಜನೆ.
ಪ್ರತಿ ವರ್ಷಮುಂಗಾರು ಮಳೆಯ ಸಮಯ ಕರಾವಳಿ ತೀರದಲ್ಲಿ ಕಡಲ್ಕೊರೆತ ಸಂಭವಿಸುವುದನ್ನು ತಡೆಗಟ್ಟಲು ಮಂಗಳೂರಿನಲ್ಲಿ ಜಲಸಾರಿಗೆ ಸಂಗ್ರಹಾಲಯ ಮತ್ತು ಅನುಭವ ಕೇಂದ್ರವನ್ನು ಪಿಪಿಪಿ ಮಾದರಿಯಲ್ಲಿ ಸ್ಥಾಪನೆ. ಕಡಲ್ಕೊರೆತದ ಪರಿಣಾಮಗಳನ್ನು ಸಮಗ್ರವಾಗಿ ಎದುರಿಸಲು ಚೆನ್ನೈ ಐಐಟಿ ಸಿದ್ಧಪಡಿಸಿರುವ ಶೋರ್ಲೈನ್ ಮ್ಯಾನೇಜ್ ಮೆಂಟ್ ಪ್ಲಾನ್ (Shoreline Management Plan) ಅನ್ನು ಜಾರಿಗೊಳಿಸಲು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಪ್ರತ್ಯೇಕವಾಗಿ ವಿಸ್ತೃತ ಯೋಜನಾ ವರದಿಗಳನ್ನು ಸಿದ್ಧಪಡಿಸಲಾಗುವುದು. ಈ ವರದಿಯಲ್ಲಿನ ಕಡಲ್ಕೊರೆತ ತಡೆಗಟ್ಟುವ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುವುದು. ಇದಕ್ಕಾಗಿ ರಾಷ್ಟ್ರೀಯ ವಿಪತ್ತು ಉಪಶಮನ ನಿಧಿಯಡಿ 200 ಕೋಟಿ ರೂ. ಖರ್ಚು ಮಾಡಲಾಗುವುದು.
*ಕಾರ್ಕಳದಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಜವಳಿ ಪಾರ್ಕ್ ಸ್ಥಾಪನೆ.
*ಕಿಯೋನಿಕ್ಸ್ ವತಿಯಿಂದ ಮಂಗಳೂರಿನಲ್ಲಿ ಪ್ಲಗ್-ಅಂಡ್-ಪ್ಲೇ ಸೌಲಭ್ಯಗಳನ್ನೊಳಗೊಂಡ ಹೊಸ ಜಾಗತಿಕ ತಂತ್ರಜ್ಞಾನ ಕೇಂದ್ರ (GTC) ಸ್ಥಾಪನೆ.
*ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ ತೀರದ ಅಭಿವೃದ್ಧಿ ಹಾಗೂ ರಸ್ತೆಬದಿ ಸೌಲಭ್ಯಗಳನ್ನು (Highway Hubs) ಉನ್ನತೀಕರಿಸುವ ಮೂಲಕ ಶೈಕ್ಷಣಿಕ, ಆರೋಗ್ಯ, , ಸಾಹಸ, ಪರಿಸರ, ಜಲಸಾರಿಗೆ ಹಾಗೂ ಕಡಲ ತೀರದ ಪ್ರವಾಸೋದ್ಯಮಗಳಿಗೆ ಲಭ್ಯವಿರುವ ಅವಕಾಶಗಳನ್ನು ಬಳಸಲು ಕ್ರಮ.
*ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ ತಲಾ 3 ಕೋಟಿ ರೂ. ನಂತೆ ಒಟ್ಟು 6 ಕೋಟಿ ರೂ. ಅನುದಾನ.
*ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭೂ ಕುಸಿತ ತಡೆಯಲು 200 ಕೋಟಿ ರೂ. ಕೋಟಿ ರೂ. ವೆಚ್ಚದಲ್ಲಿ ಕ್ರಮ
*ವಾಹನ ಸಂಚಾರವನ್ನು ಮೇಲ್ವಿಚಾರಣೆ ಮಾಡಲು ಮತ್ತು ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಪತ್ತೆ ಹಚ್ಚಿ ನಿಯಂತ್ರಿಸಲು ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಕಲಬುರಗಿ, ಬೆಳಗಾವಿ, ಚಿತ್ರದುರ್ಗ, ಹಾವೇರಿ, ಹೊಸಪೇಟೆ, ಬಳ್ಳಾರಿ, ವಿಜಯಪುರ ಜಿಲ್ಲೆಗಳ ಒಟ್ಟು 60 ಸ್ಥಳಗಳಲ್ಲಿ 50 ಕೋಟಿ ರೂ. ವೆಚ್ಚದಲ್ಲಿ AI ಆಧಾರಿತ ವಿದ್ಯುನ್ಮಾನ ಕ್ಯಾಮರಾಗಳನ್ನು ಅಳವಡಿಕೆ.