ಬಂಟ್ವಾಳ, ಮಾ.9(DaijiworldNews/TA): ಕಳೆದ 12 ದಿನಗಳಿಂದ ನಾಪತ್ತೆಯಾಗಿ ಸಾಕಷ್ಟು ಗೊಂದಲ ಸೃಷ್ಟಿಸಿದ್ದ ದಿಗಂತ್ ಕೊನೆಗೂ ಉಡುಪಿ ಡಿ ಮಾರ್ಟ್ ನಲ್ಲಿ ಪತ್ತೆಯಾಗಿದ್ದಾನೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸಂಪೂರ್ಣ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.

ಡಿ ಮಾರ್ಟ್ ಒಳಗೆ ಬಟ್ಟೆಗಳನ್ನು ಬ್ಯಾಗ್ ಗೆ ತುಂಬಿಸಿಕೊಳ್ಳುತ್ತಿದ್ದಾಗ ದಿಗಂತ ಚಲನವಲನ ಕಂಡು ಸಂಶಯಗೊಂಡ ಶಾಪಿಂಗ್ ಮಾಲ್ ನ ಸಿಬ್ಬಂದಿ ವಿಚಾರಣೆಯನ್ನು ನಡೆಸಿದ್ದಾರೆ. ವಿಚಾರಣೆ ನಡೆಸುವಾಗ ತಾನು ದಿಗಂತ್ ಎಂದು ಒಪ್ಪಿಕೊಂಡಿದ್ದು ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ.
ಪೊಲೀಸರು ಮದ್ಯಾಹ್ನ 3 ಗಂಟೆ ಸುಮಾರಿಗೆ ಉಡುಪಿಗೆ ಬಂದು ನಾಪತ್ತೆಯಾಗಿದ್ದ ದಿಗಂತ್ ನನ್ನು ಮಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ ಎಂದು ಸತೀಶ್ ಕುಂಪಲ ಹೇಳಿದ್ದಾರೆ.