ಕುಂದಾಪುರ, ಮಾ.09 (DaijiworldNews/AA): ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಹೊಳೆಗೆ ಬಿದ್ದು ಸಾವನ್ನಪ್ಪಿದ ಘಟನೆ ಆನಗಳ್ಳಿ ಎಂಬಲ್ಲಿ ಸಂಭವಿಸಿದೆ.

ತ್ರಾಸಿಯ ಸಂದೀಪ(33) ಮೃತ ದುರ್ದೈವಿ.
ಮಾ.೭ರಂದು ಮಧ್ಯಾಹ್ನ ಮೀನು ಹಿಡಿಯಲು ಮನೆಯಿಂದ ಹೋದ ಸಂದೀಪ ಅವರು ನಾಪತ್ತೆಯಾಗಿದ್ದರು. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಇನ್ನು ನಾಪತ್ತೆಯಾದ ಸಂದೀಪ್ ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿತ್ತು. ಆದರೆ ಇಂದು ಬೆಳಗ್ಗೆ ಆನಗಳ್ಳಿ ಬ್ರಿಡ್ಜ್ ಬಳಿ ಹೊಳೆಯಲ್ಲಿ ಸಂದೀಪ್ ಅವರ ಮೃತದೇಹವು ಪತ್ತೆಯಾಗಿದೆ. ಅವರು ಆನಗಳ್ಳಿ ಹೊಳೆಯಲ್ಲಿ ಮೀನು ಹಿಡಿಯುವಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.