ಬಂಟ್ವಾಳ, ಮಾ.16(DaijiworldNews/TA): ಹಿರಿಯ ಕಾಂಗ್ರೆಸ್ ರಾಜಕಾರಣಿ, ಅಮ್ಟೂರು ನಿವಾಸಿ ಅಮ್ತೂರು ರಾಯಪ್ಪಕೋಡಿ ನೋಣಯ್ಯ ಪೂಜಾರಿ (85) ಸ್ವ ಗೃಹದಲ್ಲಿ ಇಂದು ಅಲ್ಪ ಕಾಲದ ಅಸೌಖ್ಯದಿಂದ ನಿಧನ ಹೊಂದಿದರು.

ಅವರು ತುರ್ತು ಪರಿಸ್ಥಿತಿ ಸಂದರ್ಭ ದೀರ್ಘ ಕಾಲ ಜೈಲಿನಲ್ಲಿದ್ದರು. ವಿಧಾನಸಭಾ ಅಧ್ಯಕ್ಷ ಯು. ಟಿ . ಖಾದರ್, ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಶಾಸಕ ಎ. ರುಕ್ಮಯ ಪೂಜಾರಿ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಕೆ ಹರಿಕೃಷ್ಣ ಬಂಟ್ವಾಳ್, ಜಿ.ಪಂ. ಮಾಜಿ ಸದಸ್ಯರಾದ ಬಿ. ಪದ್ಮಶೇಖರ್ ಜೈನ್, ತುಂಬೆ ಪ್ರಕಾಶ್ ಶೆಟ್ಟಿ, ತಾ.ಪಂ. ಮಾಜಿ ಅಧ್ಯಕ್ಷರುಗಳಾದ ಚಂದ್ರಹಾಸ ಕರ್ಕೆರ, ಕೆ. ಪದ್ಮನಾಭ ರೈ, ಬುಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ ಮೃತರ , ನ್ಯಾಯವಾದಿ ಅಶ್ವನಿ ಕುಮಾರ್ ರೈ ಮನೆಗೆ ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ. ಮೃತರು ಇಂಜಿನಿಯರ್ ಗಣೇಶ ಅಮ್ಟೂರು ಸಹಿತ ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಆಗಲಿದ್ದಾರೆ.