ಉಡುಪಿ, ಮಾ.17 (DaijiworldNews/AA): ಶಿರ್ವಾದ ನಿವಾಸಿಯಾದ ಶೋಭರಾಜ್ (35) ಅವರು ದಿಢೀರ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ ಶೋಭರಾಜ್ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಅವರಿಗೆ ಯಾವುದೇ ರೀತಿಯ ಕಾಯಿಲೆಗಳು ಇರಲಿಲ್ಲ. ಆದರೆ ಅನಿರೀಕ್ಷಿತವಾಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಇನ್ನು ಯುವ ಜನರಲ್ಲಿ ದಿಢೀರ್ ಹೃದಯಾಘಾತದಿಂದ ಸಾವುಗಳ ಸಂಖ್ಯೆ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಏಕೆಂದರೆ ಅನೇಕ ಮಂದಿಗೆ ಯಾವುದೇ ಲಕ್ಷಣಗಳಿಲ್ಲದೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪುತ್ತಿದ್ದಾರೆ.
ಹೆಚ್ಚಿನ ತನಿಖೆಗಾಗಿ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.