ಉಡುಪಿ,ಮಾ.20(DaijiworldNews/AK): ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿದ ಪ್ರಕರಣದ ತನಿಖೆ ಮುಂದುವರೆದಿದ್ದು, ಘಟನೆಗೆ ಸಂಬಂಧಿಸಿದಂತೆ ಮತ್ತಿಬ್ಬರು ಲೀಲಾ ಮತ್ತು ಪಾರ್ವತಿ ಅವರನ್ನು ಬಂಧಿಸಲಾಗಿದ್ದು, ಇಬ್ಬರು ಪೊಲೀಸ್ ಕಾನ್ಸ್ಟೆಬಲ್ಗಳನ್ನು ಅಮಾನತುಗೊಳಿಸಲಾಗಿದೆ.

ತನಿಖೆ ಮುಂದುವರೆದಿದೆ. ಮಲ್ಪೆ ಹಲ್ಲೆ ಪ್ರಕರಣ ಘಟನೆಗೆ ಸಂಬಂಧಿಸಿದಂತೆ ನಿಖರವಾದ ಮಾಹಿತಿಯನ್ನು ಸಂಗ್ರಹಿಸಲು ವಿಫಲವಾದ ಮಲ್ಪೆ ಪೊಲೀಸ್ ಠಾಣೆಯ ಬೀಟ್ ಕಾನ್ಸ್ಟೆಬಲ್ಗಳನ್ನು ಅಮಾನತುಗೊಳಿಸಲಾಗಿದೆ.
ಈ ಪ್ರಕರಣದಲ್ಲಿ ಮಹಿಳೆಯ ವಿರುದ್ಧ ನಡೆದ ಕ್ರೂರ ಕೃತ್ಯವನ್ನು ರಾಜ್ಯ ಮಹಿಳಾ ಆಯೋಗ ತೀವ್ರವಾಗಿ ಖಂಡಿಸಿದೆ.ಹೊಣೆಗಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಯೋಗವು ನಿರ್ದೇಶಿಸಿದೆ ಮತ್ತು ತೆಗೆದುಕೊಂಡ ಕ್ರಮಗಳ ವಿವರವಾದ ವರದಿಯನ್ನು ಸಾಧ್ಯವಾದಷ್ಟು ಬೇಗ ಆಯೋಗಕ್ಕೆ ಸಲ್ಲಿಸಬೇಕು.