ಕಾಸರಗೋಡು, ಮಾ.22(DaijiworldNews/TA): ನಾಲ್ಕು ತಿಂಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಯೋ ರ್ವರು ಶನಿವಾರ ಕೋಜಿ ಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

ಕಾಞಿಂಗಾಡ್ ಖಾಸಗಿ ಆಸ್ಪತ್ರೆಯ ಮೂರನೇ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಪಾಣತ್ತೂರಿನ ಚೈತನ್ಯ ಕುಮಾರಿ (21) ಮೃತಪಟ್ಟವಳು. ಡಿ. 7 ರಂದು ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು ಬಳಿಕ ಕಣ್ಣೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಕೆಲ ದಿನಗಳ ಹಿಂದೆ ಕೋಜಿ ಕ್ಕೋ ಡ್ ನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆಸ್ಪತ್ರೆ ವಾರ್ಡನ್ ನ ಮಾನಸಿಕ ಕಿರುಕುಳ ದಿಂದ ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಆರೋಪಿ ಸಿ ಸಹಪಾಠಿ ಗಳು ದಿನಗಳ ಕಾಲ ಪ್ರತಿಭಟನೆ ನಡೆಸಿದ್ದರು. ಹಲವು ಸಂಘಟನೆಗಳು, ರಾಜಕೀಯ ಪಕ್ಷಗಳು ಪ್ರತಿಭಟನೆ ನಡೆಸಿದ್ದವು.