ಉಡುಪಿ, ಮಾ.25(DaijiworldNews/TA): ಉಡುಪಿ ನಗರ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಇವರ ನೇತೃತ್ವದಲ್ಲಿ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬವನ್ನು ಖಂಡಿಸಿ ತಾ. 1.4.2025ನೇ ಮಂಗಳವಾರದಂದು ಕಲ್ಸಂಕದಿಂದ ಇಂದ್ರಾಳಿಯ ತನಕ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಏಪ್ರಿಲ್ ಫೂಲ್ ದಿನಾಚರಣೆ ನಡೆಯಲಿದೆ.



ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಏಪ್ರಿಲ್ ಫೂಲ್ ದಿನಾಚರಣೆಯ ಅಂಗವಾಗಿ ಸ್ಟಿಕರ್ ಬಿಡುಗಡೆ ಕಾರ್ಯಕ್ರಮವು ಇಂದ್ರಾಳಿಯಲ್ಲಿ ನಡೆದ ಸಂದರ್ಭದಲ್ಲಿ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಕಾರಿಗೆ ಸ್ಟಿಕರ್ ಅಂಟಿಸುವುದರ ಮೂಲಕ ಈ ಹೋರಾಟದ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯ ಅಧ್ಯಕ್ಷರಾದ ಶ್ರೀ ಕೀರ್ತಿ ಶೆಟ್ಟಿ ಅಂಬಲಪಾಡಿ, ಪ್ರಧಾನ ಸಂಚಾಲಕರಾದ ಅಮೃತ್ ಶೆಣೈ, ಕರ್ಜೆ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷರಾದ ರಾಘವೇಂದ್ರ ಶೆಟ್ಟಿ ಕರ್ಜೆ, ಹೋರಾಟ ಸಮಿತಿಯ ಉಪಾಧ್ಯಕ್ಷರಾದ ಮಹಾಬಲ ಕುಂದರ್, ಸದಸ್ಯರಾದ ಚಾರ್ಲ್ಸ್ ಅಂಬ್ಲರ್, ರಹಿಮಾನ್, ಅನ್ಸರ್, ಭರತ್ ಕುಮಾರ್, ಸಾಯಿರಾಜ್, ಸಂಜಯ್ ಆಚಾರ್ಯ ಹಾಗೂ ಇನ್ನಿತರರು ಉಪಸ್ಥಿತರಿದ್ದರು.