ಮಂಗಳೂರು, ಮಾ.28(DaijiworldNews/TA) : ಅಕ್ರಮ ಮರಳು ಸಾಗಣೆಯಲ್ಲಿ ತೊಡಗಿದ್ದ ಲಾರಿಯನ್ನು ಅಡ್ಡೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವ್ಯಕ್ತಿಗಳ ಗುಂಪೊಂದು ಮರಳುಗಾರಿಕೆಯಲ್ಲಿ ತೊಡಗಿದ್ದು, ಸ್ಥಳದಿಂದ ಪರಾರಿಯಾಗಲು ಯತ್ನಿಸಿದ ವೇಳೆ ವಶಪಡಿಸಿಕೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.






ಬಜ್ಪೆ ಪೊಲೀಸರು ಲಾರಿಯನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ವಶಪಡಿಸಿಕೊಂಡ ಲಾರಿ ಸುಮಾರು 8 ಲಕ್ಷ ರೂ. ಮೌಲ್ಯದ್ದಾಗಿದ್ದು, ಸುಮಾರು 15,000 ರೂ. ಮೌಲ್ಯದ 17 ಮೆಟ್ರಿಕ್ ಟನ್ ಮರಳನ್ನು ಸಾಗಿಸುತ್ತಿತ್ತು. ಅಧಿಕಾರಿಗಳು ಈ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.