ಕೋಟ, ಮಾ.29 (DaijiworldNews/AA): ಟಿಪ್ಪರ್ ಹಾಗೂ ಖಾಸಗಿ ಬಸ್ ಪರಸ್ಪರ ಢಿಕ್ಕಿ ಹೊಡೆದು ಐವರು ಬಸ್ ಪ್ರಯಾಣಿಕರು ಗಾಯಗೊಂಡ ಘಟನೆ ಮಾ.28ರಂದು ಸಾಲಿಗ್ರಾಮ ಆಂಜನೇಯ ದೇಗುಲದ ಎದುರು ನಡೆದಿದೆ.

ಕುಂದಾಪುರ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಎಕ್ಸ್ಪ್ರೆಸ್ ಬಸ್ ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದೆ. ಬಸ್ ಸರ್ವಿಸ್ ರಸ್ತೆಯಿಂದ ಮುಖ್ಯ ರಸ್ತೆಗೆ ಬರುವ ವೇಳೆ ಮುಖ್ಯ ರಸ್ತೆಯಿಂದ ಸರ್ವಿಸ್ ರಸ್ತೆಗೆ ಬಂದ ಟಿಪ್ಪರ್ಗೆ ಢಿಕ್ಕಿಯಾಗಿದೆ.
ಅಪಘಾತದಲ್ಲಿ ಗಾಯಗೊಂಡ ಐವರು ಪ್ರಯಾಣಿಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಢಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಜಖಂಗೊಂಡಿವೆ.