ಪುತ್ತೂರು, ಜೂ16(Daijiworld News/SS): ಕಾಂಗ್ರೆಸ್ ಮುಖಂಡ ಮತ್ತು ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ತಾಲೂಕಿನ ನರಿಮೊಗರು ಗ್ರಾಮದ ಮುಕ್ವೆ ಎಲಿಕ ನಿವಾಸಿ ಜಯರಾಜ್ ಜೈನ್ (65) ಆತ್ಮಹತ್ಯೆಗೆ ಶರಣಾದವರು.
ಕಾಂಗ್ರೆಸ್ ಪಕ್ಷ ಮತ್ತು ಕಂಬಳ ಕ್ಷೇತ್ರದಲ್ಲಿ ಅಪಾರ ಮೆಚ್ಚುಗೆಗೆ ಪಾತ್ರವಾಗಿದ್ದ ಜಯರಾಜ್ ಜೈನ್ ಜೂ.16ರಂದು ಬೆಳಿಗ್ಗೆ ತನ್ನ ಮನೆಯ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾಂಗ್ರೆಸ್ ಮುಖಂಡರಾಗಿದ್ದ ಇವರು ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಉಪಾಧ್ಯಕ್ಷ ಹಾಗೂ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ಹಾಗೂ ಒರ್ವ ಪುತ್ರನನ್ನು ಅಗಲಿದ್ದಾರೆ.
ಕಂಬಳ ಕ್ಷೇತ್ರದ ಸಾಧಕರಾಗಿದ್ದ ಜಯರಾಜ್ ಜೈನ್ ಸಾವಿಗೆ ಸ್ಥಳೀಯರು ಸಂತಾಪ ಸೂಚಿಸಿದ್ದಾರೆ.