ಉಡುಪಿ, ಮಾ.30 (DaijiworldNews/AA): ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಮಹೇಶ್ಚಂದ್ರ ಕೆ ಅವರನ್ನು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕೆ ಅವರು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಮಹೇಶ್ಚಂದ್ರ ಕೆ ಅವರು ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿ ಮತ್ತು ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಅವಧಿಯಲ್ಲಿ ವಿವಿಧ ವಿಷಯಗಳಲ್ಲಿ ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಆರೋಪ ಅವರ ಮೇಲಿದೆ.
ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಎಸ್ ಹೆಗಡೆ ಅವರಿಗೆ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರ ಹೆಚ್ಚುವರಿ ಪ್ರಭಾರವನ್ನು ನೀಡಲಾಗಿದೆ.