ಮಂಗಳೂರು, ಜೂ 17(Daijiworld News/MSP): ಮುಂಗಾರು ದುರ್ಬಲಗೊಂಡಿರುವ ಪರಿಣಾಮ ಭಾನುವಾರವೂ ಬಿಸಿಲಿನ ಜತೆಗೆ ಒಂದೆರಡು, ಸಣ್ಣ ಪ್ರಮಾಣದ ಮಳೆಯಾಗಿದೆ. ಎರಡು ದಿನ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಈ ನಡುವೆ ಅರಬ್ಬೀ ಸಮುದ್ರದಲ್ಲಿ ಉಂಟಾದ 'ವಾಯು' ಚಂಡಮಾರುತ ಬಳಿಕ ಮತ್ತೆ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಗಳಿವೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗುವ ವಾಯುಭಾರ ಕುಸಿತ ಸ್ಪಷ್ಟ ಚಿತ್ರಣ ಜೂ.18ರ ಬಳಿಕ ದೊರೆಯಲಿದೆ. ಮಂಗಳೂರಿನಿಂದ ಕಾರವಾರದವರೆಗೆ ಅಲೆಗಳ ಅಬ್ಬರ ಹೆಚ್ಚಾಗಲಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರ ನೀಡಲಾಗಿದೆ.