ಮಂಗಳೂರು:ವೆನ್ಲಾಕ್ ಆಸ್ಪತ್ರೆಯ ವೀಡಿಯೋ ವೈರಲ್; ರೋಗಿಯ ಸ್ನೇಹಿತರ ವಿರುದ್ಧ ದೂರು ದಾಖಲು
Mon, Jun 17 2019 07:39:18 PM
ಮಂಗಳೂರು,ಜೂ17(DaijiworldNews/AZM):ಅಪಘಾತವೊಂದರಲ್ಲಿ ಗಾಯಗೊಂಡಿದ್ದ ರೋಗಿಗೆ ಚಿಕಿತ್ಸೆ ನೀಡದೆ ಸರಕಾರಿ ಆಸ್ಪತ್ರೆ ವೈದ್ಯರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿ ರೋಗಿಯ ಸ್ನೇಹಿತರಿಂದ ಆಸ್ಪತ್ರೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಚಿಕಿತ್ಸೆಗೆಂದು ನಗರದ ಸರಕಾರಿ ಆಸ್ಪತ್ರೆಗೆ ತರಲಾಗಿತ್ತು, ಸುಮಾರು ಒಂದೂವರೆ ಗಂಟೆಗಳವರೆಗೆ ಆಸ್ಪತ್ರೆಯ ವೈದ್ಯರಾಗಲಿ, ಸಿಬ್ಬಂದಿಗಳಾಗಲಿ ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿ ರೋಗಿಯ ಸ್ನೇಹಿತರು ಆಸ್ಪತ್ರೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿತ್ತು.
ಇನ್ನು ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ಸ್ನೇಹಿತರು ಆಸ್ಪತ್ರೆಯ ಸಿಬ್ಬಂದಿಗಳಿಗೆ ಹಾಗೂ ವೈದ್ಯರಿಗೆ ಅವ್ಯಾಚ ಶಬ್ದಗಳಿಂದ ಬೈದು ನಿಂದಿಸಿ, ಆಸ್ಪತ್ರೆ ನಿಯಮಗಳು ಮೀರಿದ್ದಾರೆ ಎಂದು ಆರೋಪಿಸಿ ವೆನ್ಲಾಕ್ ಆಸ್ಪತ್ರೆಯ ವೈದ್ಯಾಧಿಕಾರಿ ಮಂಗಳೂರು ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ. ಮಂಗಳೂರು ಪಾಂಡೇಶ್ವರ ಠಾಣಾ ಪೋಲಿಸ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.