ಮೂಲ್ಕಿ, ಏ.19 (DaijiworldNews/AA): ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ರಥದ ಮೇಲ್ಭಾಗ ಮುರಿದು ಬಿದ್ದಿದ್ದು, ಅದೃಷ್ಟವಶಾತ್ ತೇರಿನಲ್ಲಿದ್ದ ಅರ್ಚಕರ ಸಹಿತ ಹಲವಾರು ಮಂದಿ ಅಪಾಯದಿಂದ ಪಾರಾಗಿದ್ದಾರೆ.




ಶನಿವಾರ ಬೆಳಗ್ಗಿನ ಜಾವ ಸುಮಾರು 1:40 ರಿಂದ 2:00 ಗಂಟೆ ವೇಳೆ ಬ್ರಹ್ಮರಥೋತ್ಸವ ತೇರಿನ ಮೇಲ್ಭಾಗ ಮುರಿದು ಬಿದ್ದಿದೆ. ರಥ ಕುಸಿಯುವ ವೇಳೆ ಅರ್ಚಕರು ತೇರಿನಲ್ಲೇ ಇದ್ದರು. ಆದರೆ ಅದೃಷ್ಟವಶಾತ್ ತೆರಿನಲ್ಲಿದ್ದ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎನ್ನಲಾಗಿದೆ.
ಈ ಘಟನೆಯು ನೆರೆದಿದ್ದ ಭಕ್ತರ ಆತಂಕಕ್ಕೆ ಕಾರಣವಾಯಿತು. ನಂತರ ದೇವರ ಉತ್ಸವವನ್ನು ಚಂದ್ರ ಮಂಡಲ ರಥದಲ್ಲಿ ನೆರವೇರಿಸಲಾಯಿತು.