ಬೆಳ್ತಂಗಡಿ, ಏ.19 (DaijiworldNews/AA): ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾವೊಂದು ನಿರ್ಮಾಣ ಹಂತದ ಕಿರು ಸೇತುವೆಯ ಚರಂಡಿಗೆ ಉರುಳಿ ಬಿದ್ದು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಉಜಿರೆ- ಬೆಳ್ತಂಗಡಿ ರಸ್ತೆಯ ಬೆನಕ ಆಸ್ಪತ್ರೆಯ ಸಮೀಪ ಗುರುವಾರ ರಾತ್ರಿ ನಡೆದಿದೆ.

ಘಟನೆಯಲ್ಲಿ ಆಟೋರಿಕ್ಷಾ ಚಾಲಕ ಲಾಯಿಲದ ಅಹಮದ್ (65) ಗಂಭೀರವಾಗಿ ಗಾಯಗೊಂಡಿದ್ದಾರೆ.
ಉಜಿರೆ ಕಡೆಗೆ ಹೋಗುತ್ತಿದ್ದ ರಿಕ್ಷಾವು ಚಾಲಕನ ನಿಯಂತ್ರಣ ತಪ್ಪಿ ನಿರ್ಮಾಣ ಹಂತದ ಕಿರು ಸೇತುವೆಯ ಚರಂಡಿಗೆ ಉರುಳಿ ಬಿದ್ದಿದೆ. ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.