ಮಂಗಳೂರು, ಮೇ. 03 (DaijiworldNews/AA): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.



ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಶನಿವಾರ ಮಂಗಳೂರಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಶಂಕಿತರನ್ನು ಮಂಗಳೂರು ಜಿಲ್ಲೆಯ ವಿವಿಧ ಭಾಗಗಳಿಂದ ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಗೃಹ ಸಚಿವ ಪರಮೇಶ್ವರ್ ಜೊತೆ ಸಭೆ ನಡೆಸಿದ ನಂತರ ಮಾತನಾಡಿದ ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಘಟನೆ ಸಂಬಂಧ ಎಂಟು ಮಂದಿಯನ್ನು ಬಂಧಿಸಲಾಗಿದೆ. ಅಬ್ದುಲ್ ಸಪ್ವಾನ್, ನಿಯಾಜ್ ಮತ್ತು ಮೊಹಮ್ಮದ್ ಮುಸಮ್ಮೀರ್, ಕಲಂದರ ಶಾಫಿ, ಆದಿಲ್ ಮೆಹರೂಫ್, ನಾಗರಾಜ್, ಮೊಹಮ್ಮದ್ ರಿಜ್ವಾನ್ ಮತ್ತು ರಂಜಿತ್ ಬಂಧಿತ ಆರೋಪಿಗಳು ಎಂದು ವಿವರ ನೀಡಿದ್ದಾರೆ.