ಪುತ್ತೂರು, ಮೇ. 11 (DaijiworldNews/TA): ಕೆಎಸ್ಆರ್ಟಿಸಿ ಬಸ್ಸೊಂದರ ಚಾಲಕನ ನಿರ್ಲಕ್ಷತನದ ಚಾಲನೆಯಿಂದ ತಂದೆ ಮತ್ತು ಮಗ ಮೃತಪಟ್ಟ ಹೃದಯವಿದ್ರಾವಕ ಘಟನೆ ಪುತ್ತೂರಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ನರಿಕೊಂಬು ಬಳಿಯ ಬೋರುಗುಡ್ಡೆ ನಿವಾಸಿ ನರಿಕೊಂಬು ಗ್ರಾಪಂ ಸದಸ್ಯ ಹಾಗೂ ಸಮಾಜಸೇವಾ ಬ್ಯಾಂಕ್ ನಿರ್ದೇಶಕರಾದ ಅರುಣ್ ಕುಲಾಲ್ (45) ಹಾಗೂ ಅವರ ಪುತ್ರ ಧ್ಯಾನ್ (15) ರಸ್ತೆ ಅಪಘಾತಕ್ಕೆ ಬಲಿಯಾದ ದುರ್ದೈವಿಗಳು.



ಮಾಣಿ-ಮೈಸೂರು ರಾ.ಹೆದ್ದಾರಿಯ ಕಬಕ ಸಮೀಪದ ಕುವೆತ್ತಿಲ ಎಂಬಲ್ಲಿನ ತಿರುವುವೊಂದರಲ್ಲಿ ಕೆಎಸ್ಸಾರ್ಟಿಸಿ ಬಸ್ಸು ಮತ್ತು ಬೈಕ್ ನಡುವೆ ಡಿಕ್ಕಿ ಸಂಭಿಸಿತ್ತು. ಈ ಘಟನೆಯಲ್ಲಿ ಅರುಣ್ ಕುಲಾಲ್ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅವರ ಪುತ್ರ ಧ್ಯಾನ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ.
ತನ್ನ ಸಂಬಂಧಿಕರೊಬ್ಬರು ಮಗಳ ಮದುವೆ ಸುಳ್ಯದಲ್ಲಿ ನಡೆಯುತ್ತಿದ್ದು, ಶುಭಸಮಾರಂಭದಲ್ಲಿ ಪಾಲ್ಗೊಳ್ಳಲು ತಂದೆ ಮತ್ತು ಮಗ ಇಬ್ಬರೂ ಬೈಕ್ ನಲ್ಲಿ ಹೊರಟಿದ್ದರು.ಆದರೆ ಕುವೆತ್ತಿಲ ತಿರುವಿನಲ್ಲಿ ವಿರುದ್ಧ ದಿಕ್ಕಿನಲ್ಲಿ ಬಂದ ಸರ್ಕಾರಿ ಬಸ್ಸಿನ ಚಾಲಕನ ನಿರ್ಲಕ್ಷತೆ ಹಾಗೂ ಬೇಜವಾಬ್ದಾರಿಯ ವಾಹನ ಚಾಲನೆಗೆ ಇವರಿಬ್ಬರೂ ಬಲಿಯಾಗಿದ್ದಾರೆ. ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಕೆಎಸ್ಸಾರ್ಟಿಸಿ ಚಾಲಕನ ಮೇಲೆ ಪ್ರಕರಣ ದಾಖಲಿಸಲಾಗಿದೆ.