ಉಡುಪಿ, ಮೇ. 12 (DaijiworldNews/AA): ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕಿ, ಶಿರ್ವ ನಿವಾಸಿ ಲೀನಾ ಮಥಾಯಸ್ ಅವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.

ಲೀನಾ ಮಥಾಯಸ್ ಅವರು ರಸ್ತೆ ಬದಿಯಲ್ಲಿ ನಿಂತಿದ್ದಾಗ ಅವರಿಗೆ ಕಾರು ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಲೀನಾ ಮಥಾಯಸ್ ಅವರು ಹಿರಿಯ ಕಾಂಗ್ರೆಸ್ ನಾಯಕಿಯಾಗಿದ್ದು, ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು. ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನ ಉಪಾಧ್ಯಕ್ಷೆ, ರಾಜ್ಯ ಮಹಿಳಾ ಕಾಂಗ್ರೆಸ್ನ ಮಾಜಿ ಕಾರ್ಯದರ್ಶಿ ಮತ್ತು ಶಿರ್ವ ಗ್ರಾಮ ಪಂಚಾಯತ್ನ ಮಾಜಿ ಸದಸ್ಯೆಯಾಗಿದ್ದರು.
ಅಪಘಾತದ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.